ಮಾನ್ವಿ: ಮಕ್ಕಳ ಶಿಕ್ಷಣಕ್ಕೆ KKRDBಯಿಂದ ಹೆಚ್ಚಿನ ಆದ್ಯತೆ ಸಚಿವ ಎನ್ ಎಸ್ ಬೋಸರಾಜು
Manvi, Raichur | Nov 7, 2025 ಸಿರವಾರ ತಾಲೂಕಿನ ಬಾಗಲವಾಡ ಗ್ರಾಮದಲ್ಲಿ ಇಂದಿರಾ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಯೋಜನೆ ಅಡಿಯಲ್ಲಿ 14 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾದ ಶಾಲಾ ತರಗತಿ ಕೊಠಡಿಯನ್ನು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಹಾಗೂ ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಂಪಯ್ಯ ನಾಯಕ ಅವರು ನೂತನ ತರಗತಿ ಕೊಠಡಿಯನ್ನು ಲೋಕಾರ್ಪಣೆ ಗೊಳಿಸಿದರು. ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಶಾಲೆಗಳಿಗೆ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಹಾಗೂ ಶಾಲೆಗಳಿಗೆ ಮೂಲ ಸೌಲಭ್ಯಗಳನ್ನು ಒದಗಿಸಲು ಹೆಚ್ಚಿನ ಅನುದಾನವನ್ನ ಮೀಸಲಿಡಲಾಗುತ್ತಿದೆ ಎಂದರು.