ದೇವದುರ್ಗ ತಾಲ್ಲೂಕಿನಲ್ಲಿ ಮೆಣಸಿನ ಕಾಯಿ ಬೆಳೆದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಮ್ಮ ಜಮೀನಿನಲ್ಲಿ ಮೆಣಸಿನಕಾಯಿ ಬೆಳೆ ನಾಟಿ ಮಾಡಿದ್ದು, ಇದೀಗ ಫಸಲು ಆರಂಭವಾಗಿದೆ, ಕಾಯಿ ಬಿಡುತ್ತಿದೆ. ಆದರೇ ಇದೀಗ ರೈತರಿಗೆ ನೀರಿನ ಸಮಸ್ಯೆ ಎದುರಾಗಿದೆ. ಸಂಬಂಧಪಟ್ಟ ಇಲಾಖೆ ಕೂಡಲೇ ಸಮಸ್ಯೆಯನ್ನು ಅರಿತು ನೀರು ಬಿಡುವ ವ್ಯವಸ್ಥೆ ಮಾಡಬೇಕು ಎಂಬುದು ರೈತರ ಮನವಿಯಾಗಿದೆ.