ಮಂಡ್ಯ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿಯವರು ಕೃಷ್ಣರಾಜನಗರದಲ್ಲಿರುವ ವಿಪ ಸದಸ್ಯ ಹೆಚ್.ವಿಶ್ವನಾಥ್ ಮನೆಗೆ ಭೇಟಿ ನೀಡಿ ಚುನಾವಣೆಯಲ್ಲಿ ಸಹಕಾರ ನೀಡುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್, ಮಾಜಿ ಪ್ರಧಾನಿ ದೇವೇಗೌಡರು ನನಗೆ ಕಷ್ಟಕಾಲದಲ್ಲಿ ಆಗಿದ್ದಾರೆ, ಕುಮಾರಸ್ವಾಮಿ ಒಳ್ಳೆ ವ್ಯಕ್ತಿ, ಮಂಡ್ಯದಲ್ಲಿ ಕುಮಾರಸ್ವಾಮಿ, ಮೈಸೂರಿನಲ್ಲಿ ಯದುವೀರ್ ಗೆಲ್ಲಿಸಲು ಸಹಕಾರ ನೀಡುತ್ತೇನೆ ಎಂದರು. ಈ ವೇಳೆ ಮಾಜಿ ಸಚಿವ ಪುಟ್ಟರಾಜು, ಶಾಸಕ ಜಿ.ಟಿ.ದೇವೇಗೌಡ ಸೇರಿದಂತೆ ಹಲವರು ಇದ್ದರು.