ಬೆಳಗಾವಿ ನಗರದಲ್ಲಿ ಇಂದು ರವಿವಾರ ಸಾಯಂಕಾಲ 5 ಗಂಟೆ ಸುಮಾರಿಗೆ ಬೆಳಗಾವಿ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ನೀಡುವಂತೆ ಸಂಭಂದ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.ಈ ವೇಳೆ ವಿವಿಧ ಕಾರ್ಯಕ್ರಮಗಳಿಗೆ ನೀಡಿದ ಆಹ್ವಾನವನ್ನು ಸ್ವೀಕರಿಸಿದರು. ಕಾರ್ಯಕ್ರಮಕ್ಕೆ ಭಾಗಿಯಾಗುವುದಾಗಿ ಭರವಸೆ ನೀಡಿದರು.