ರಾಜ್ಯ ಕಾಂಗ್ರೆಸ್ ನಾಯಕರು ಫ್ರೀಡಂ ಪಾರ್ಕ್ನಲ್ಲಿ ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಮತ ಚೋರಿ ವಿರುದ್ಧ ಪ್ರತಿಭಟನೆ ನಡೆಸಿದರು. ರಾಜ್ಯ ಯೂತ್ ಕಾಂಗ್ರೆಸ್ನಿಂದ ಆಯೋಜಿಸಿರುವ ಈ ಪ್ರತಿಭಟನೆಯಲ್ಲಿ ಸಚಿವ ಸಂತೋಷ್ ಲಾಡ್, ರಾಜ್ಯಸಭೆ ಸದಸ್ಯ ಜಿ.ಸಿ. ಚಂದ್ರಶೇಖರ್, ಮೇಲ್ಮನೆ ಸಚೇತಕ ಸಲೀಂ ಅಹ್ಮದ್, ಎಐಸಿಸಿ ಯೂತ್ ಅಧ್ಯಕ್ಷ ಉದಯ್ ಬಾನು, ರಾಜ್ಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಸೇರಿ ಹಲವು ನಾಯಕರು ಭಾಗಿಯಾಗಿದ್ದರು. ಪ್ರತಿಭಟನೆಯಲ್ಲಿ ಮತಗಳ್ಳತನದ ವಿರುದ್ಧ ಚುನಾವಣಾ ಆಯೋಗದ ವಿರುದ್ಧ ಧಿಕ್ಕಾರ ಕೂಗಿದ ಕೈ ನಾಯಕರು ಬಿಜೆಪಿ, ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ಹೊರ ಹಾಕಿದರು.