ಮಹಾನಗರ ಪಾಲಿಕೆಯ ಎಲ್ಲಾ ಶಾಖಾ ಮುಖ್ಯಸ್ಥರೊಂದಿಗೆ ಇಂದು ಮಂಗಳವಾರ 12 ಗಂಟೆಗೆ ಪಾಲಿಕೆ ಆಯುಕ್ತ ಅವಿನಾಶ ಶಿಂದೆ ಸಭೆ ನಡೆಸಿದರು. ಸಭೆಯಲ್ಲಿ ಲೋಕಾಯುಕ್ತರ ಬಳಿ ದಾಖಲಾಗಿರುವ ಪ್ರಕರಣಗಳ ಕುರಿತು ಚರ್ಚಿಸಲಾಯಿತು. ಈ ವೇಳೆ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ವಿಳಂಬವಿಲ್ಲದೆ ಆದ್ಯತೆ ಮೇರೆಗೆ ತ್ವರಿತವಾಗಿ ಪರಿಹರಿಸುವಂತೆ ಆಯುಕ್ತರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಜನಸಾಮಾನ್ಯರಿಗೆ ತೊಂದರೆ ಆಗದಂತೆ ಕಾರ್ಯನಿರ್ವಹಿಸಬೇಕೆಂದು ಅವರು ತಿಳಿಸಿದರು.