ಶಿರಸಿ : ತಾಲೂಕಿನ ಅಗಸೆಬಾಗಿಲು ಸ್ಮಶಾನದ ಮುಂದೆ ಅರಣ್ಯ ಇಲಾಖೆಗೆ ಸಂಬಂಧಿಸಿದ ಸರಕಾರಿ ಅರಣ್ಯ ಬೆಟ್ಟದಲ್ಲಿ ಅಕ್ರಮವಾಗಿ ಮನೆ ನಿರ್ಮಿಸಲು ಸಿದ್ಧತೆ ನಡೆಸಿರುವ ಬಗ್ಗೆ ಸೋಮವಾರ ಬೆಳಿಗ್ಗೆ 11:00 ಗಂಟೆ ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ. ಮಾಹಿತಿಯ ಪ್ರಕಾರ ಅರಣ್ಯ ಇಲಾಖೆಯವರೇ ಜಿಪಿಎಸ್ ಮಾಡಿಕೊಟ್ಟಿದ್ದಾರೆಂದು ಹೇಳಲಾಗುತ್ತಿದ್ದು ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂಬ ಆಗ್ರಹ ಕೇಳಿ ಬರುತ್ತಿದೆ.