ಕಲ್ಯಾಣ ಕರ್ನಾಟಕ ಶೈಕ್ಷಣಿಕ ಬಿಕ್ಕಟ್ಟು ನಿವಾರಣೆಗಾಗಿ ಎಸ್ ಐ ಓ ಮತ್ತು ಸಿಇಆರ್ ಎ ವತಿಯಿಂದ ಡಿ.15 ರಿಂದ ಫೆ. 15 ವರೆಗೆ ಕಲಿಕೆಯೇ ಕಲ್ಯಾಣ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಯುನಿಟ್ ಅಧ್ಯಕ್ಷರಾದ ಸಯ್ಯದ್ ಆಶಿಫ್ ಸಾಬ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಕ್ಷೇತ್ರದಲ್ಲಿ ಸುಧಾರಣೆ ಮಾಡುವ ಮೂಲಕ ಫಲಿತಾಂಶ ಹೆಚ್ಚಳಕ್ಕೆ ಕ್ರಮ ವಹಿಸಲಾಗುತ್ತಿದೆ ಎಂದರು.