ಇಂದು ಕೆಪಿಸಿಸಿ ಕಚೇರಿ ಬಳಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಸತೀಶ್ ಜಾರಕಿಹೊಳಿ ಅವರು ಪಕ್ಷದ ಹಿರಿಯ ನಾಯಕರು ಮತ್ತು ಪಕ್ಷದ ದೊಡ್ಡ ಆಸ್ತಿ ಎಂದರು. 2028 ಮತ್ತು 2029ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಕಾರ್ಯತಂತ್ರದ ಬಗ್ಗೆ ಅವರೊಂದಿಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು. ತಾನು ಪಕ್ಷದ ಅಧ್ಯಕ್ಷನಾಗಿಯೂ, ಸತೀಶ್ ಜಾರಕಿಹೊಳಿ ಕಾರ್ಯಾಧ್ಯಕ್ಷರಾಗಿಯೂ ಇಬ್ಬರೂ ಆತ್ಮೀಯ ಸ್ನೇಹಿತರಾಗಿದ್ದು, ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ ಎಂದರು.