ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನ: ನಗರದಲ್ಲಿ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ
ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ಎಪ್ಪತ್ತೈದನೇ ಜನ್ಮದಿನಾಚರಣೆ ಅಂಗವಾಗಿ ಶಿವಮೊಗ್ಗ ನಗರದ ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ವಿಶೇಷ ಪೂಜೆಯನ್ನ ಬುಧವಾರ ಸಲ್ಲಿಸಲಾಯಿತು. ಸಂಸದ ಬಿ ವೈ ರಾಘವೇಂದ್ರ ನೇತೃತ್ವದಲ್ಲಿ ಕೋಟೆ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿ ಬಳಿಕ ದೇವಾಲಯಕ್ಕೆ ಬಂದ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಾಯಿತು.