Install App
Login
HOME
Delhi
Haryana
Uttar Pradesh
Bihar
Chhattisgarh
Madhya Pradesh
Rajasthan
Jharkhand
Himachal Pradesh
Uttarakhand
Punjab
Andhra Pradesh
Telangana
Tamil Nadu
Karnataka
Maharashtra
Assam
West Bengal
Tripura
Gujarat
Odisha
Kerala
Jansamasya
अपराध
News
पुलिस
Bjp
National
Police
Bihar
India
कांग्रेस
भारत
बीजेपी
भाजपा
Congress
Modi
Delhi
Viral
Crime
Up
Bollywood
Breakingnews
Narendramodi
Madhya_pradesh
उत्तरप्रदेश
Madhyapradesh
Rahulgandhi
यूपी
Uttarpradesh
Haryana
Crimenews
dipryadgir
ನಾಯ್ಕಲ್ ಗ್ರಾಮ ದಲ್ಲಿ ಪ್ರಜಾ ಸೇವಾ ಕಾರ್ಯಕ್ರಮಕ್ಕೆ ಚಾಲನೆ ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ
Yadgir, Karnataka
| Nov 23, 2026
ನಾಯ್ಕಲ್ ಗ್ರಾಮ ದಲ್ಲಿ ಪ್ರಜಾ ಸೇವಾ ಕಾರ್ಯಕ್ರಮಕ್ಕೆ ಚಾಲನೆ ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ
MORE NEWS
YADGIR BREAKING NEWS
Yadgir, Yadgir | Nov 23, 2026
ವಿಕಲಚೇತನರ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ================== ಯಾದಗಿರಿ, ನವೆಂಬರ್.23: 2026ರ ವಿಶ್ವ ವಿಕಲಚೇತನರ ದಿನಾಚರಣೆಯ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ವಿಕಲಚೇತನರಿಗಾಗಿ ಆಯೋಜಿಸಲಾಗಿದ್ದ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಇಂದು ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಯಶಸ್ವಿಯಾಗಿ ನಡೆದವು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ತಿಪ್ಪಣ್ಣ ಸಿರಸಗಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾದ ಶರಣಪ್ಪ ಪಾಟೀಲ್, ಸಾಹೇಬ್ ಜಾನಿ, ಅಜಿತ್ ದೋಖಾ ಹಾಗೂ ವಕೀಲರಾದ ಸುಭಾಷ್ ರಾಂಪೂರಕರ್ ಅವರು ಜಂಟಿಯಾಗಿ ಹಸಿರು ನಿಶಾನೆ ತೋರಿಸುವ ಮೂಲಕ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ವಿಕಲಚೇತನರು ಅತ್ಯಂತ ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಕ ಸಿಬ್ಬಂದಿ, ಆರೋಗ್ಯ ಇಲಾಖೆ ಹಾಗೂ ಡಿ.ಡಿ.ಆರ್.ಸಿ ಸಿಬ್ಬಂದಿ ವರ್ಗದವರು, ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ವಿವಿಧ ಸಂಘ-ಸAಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ಅಲ್ಲದೆ, ಇಲಾಖೆಯ ಗ್ರಾಮೀಣ, ನಗರ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ಮತ್ತು ವಿಕಲಚೇತನರ ಸಹಾಯವಾಣಿ ಕೇಂದ್ರದ ಸಿಬ್ಬಂದಿ ವರ್ಗದವರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
Yadgir, Yadgir | Nov 23, 2026
I got over 60,000 reactions on my posts last week! Thanks everyone for your support! 🎉
Yadgir, Yadgir | Nov 23, 2026
ಕೋಟಿ ಬೆಲೆಯ ಆಭರಣಗಳ ನಡುವೆ ಸಿಂಪಲ್ ಸೀರೆಯಲ್ಲಿ ಮಿಂಚಿದ ಸಾಯಿ ಪಲ್ಲವಿ; ಸರಳತೆಗೆ ಫಿದಾ ಆದ ಅಭಿಮಾನಿಗಳು! #fbphotopost #viralreels #photography #photographychallengechallenge @topfans Yadgir News Laxmikanth Nayak Kollur #tollywood #bollywood #salmankhan
Yadgir, Yadgir | Nov 22, 2026
ಗ್ಯಾಸ್ ಸೋರಿಕೆಯಿಂದ ಎಗ್ ರೈಸ್ ಅಂಗಡಿಯಲ್ಲಿ ಭೀಕರ ಅಗ್ನಿ ದುರಂತ; ಅಂಗಡಿ ಸಂಪೂರ್ಣ ಸುಟ್ಟು ಕರಕಲು! ದಾವಣಗೆರೆ: ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ಗ್ಯಾಸ್ ಸೋರಿಕೆಯಿಂದ ಎಗ್ ರೈಸ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಚಂದ್ರಣ್ಣ ಎಂಬುವವರಿಗೆ ಸೇರಿದ ಎಗ್ ರೈಸ್ ಅಂಗಡಿಯಲ್ಲಿ ಎಗ್ ರೈಸ್ ತಯಾರಿಸುವ ವೇಳೆ ಗ್ಯಾಸ್ ಸೋರಿಕೆಯಾಗಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಅಂಗಡಿಯಾದ್ಯಂತ ವ್ಯಾಪಿಸಿದ್ದು, ಅಂಗಡಿ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದು ಸಮಾಧಾನಕರ ಸಂಗತಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚನ್ನಗಿರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Yadgir, Yadgir | Nov 21, 2026
ಇಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ =================== ಯಾದಗಿರಿ, ನವೆಂಬರ್.21 : ಜಾಕವೆಲ್ನಿಂದ ಫಿಲ್ಟರ್ ಬೆಡ್ಗೆ ಸಂಪರ್ಕ ಕಲ್ಪಿಸುವ ಮುಖ್ಯ ರೈಸಿಂಗ್ ಪೈಪ್ ಲೈನ್ ಮುದ್ನಾಳ ಹೋಂಡಾ ಶೋ ರೂಮ್ ಹತ್ತಿರ ಲಿಕೆಜ್ ಆಗುತ್ತಿದ್ದು, ಇದರಿಂದ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ಸದರಿ ಲಿಕೇಜನ್ನು ರಿಪೇರಿ ಮಾಡುವ ಅವಶ್ಯಕತೆ ಇರುವುದರಿಂದ ದಿನಾಂಕ: 21-11-2026 ರಂದು ಯಾದಗಿರಿ ನಗರದಲ್ಲಿ ನೀರು ಸರಬರಾಜು ಇರುವುದಿಲ್ಲ. ದುರಸ್ತಿ ಕಾರ್ಯ ಸುಗಮವಾಗಿ ನಡೆಯಲು ನಗರದ ಸಾರ್ವಜನಿಕರು ಸಹಕರಿಸಬೇಕೆಂದು ಯಾದಗಿರಿ ನಗರಸಭೆ ಪೌರಾಯುಕ್ತರು ಸಾರ್ವಜನಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Yadgir, Yadgir | Nov 21, 2026
Yadgir, Yadgir | Nov 21, 2026
Yadgir, Yadgir | Nov 21, 2026