ಜಮಖಂಡಿ: ನಗರದಲ್ಲಿ ಓಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನ ನಡೆಸಿದ ಕಾಂಗ್ರೆಸ್ ನಾಯಕರು
ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರ ನೇತೃತ್ವದಲ್ಲಿ ಓಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನ ಜರುಗಿತು.ದೇಶದ ಪ್ರಧಾನಿ ಮತಗಳ್ಳತನದ ಮೇಲೆ ಚುನಾವಣೆ ಗೆದ್ದು ಆಡಳಿತ ನಡೆಸುತ್ತಿದ್ದಾರೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಆರೋಪಿಸಿದರು. ನಗರದಲ್ಲಿ ಮಾಜಿ ಶಾಸಕರ ಗೃಹ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ಓಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನದಲ್ಲಿ ಅವರು ಮಾತನಾಡಿದರು.