ತಾಲೂಕಿನ ಗೋಸಿಕೆರೆ ಗ್ರಾಮದ ನಿವೇಶನ ರಹಿತ ಕುಟುಂಬಗಳಿಗೆ ಹಕ್ಕುಪತ್ರ ನೀಡಿಲ್ಲ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿ ಟಿಡಿ .ರಾಜಗಿರಿ ಬಣದ ಸಹಯೋಗದಲ್ಲಿ ಗ್ರಾಮಸ್ಥರು ತಾಲೂಕು ಪಂಚಾಯಿತಿ ಕಚೇರಿ ಮುಂದ ನಡೆಸುತ್ತಿರುವ ಧರಣಿ ಸತ್ಯಾಗ್ರಹಇಂದಿಗೆ ಮೂರನೆ ದಿನಕ್ಕೆ ಕಾಲಿಟ್ಟಿದೆ. ತಾಲೂಕಿನ ಗೋಸಿಕೆರೆ ಸಮೀಪದ ಸನಂ 10ರಲ್ಲಿ 6 ಎಕರೆ ಸರ್ಕಾರಿ ಭೂಮಿಯನ್ನು ನಿವೇಶನಕ್ಕೆ ನಿಗದಿಪಡಿಸಲಾಗಿದೆ. 2014 ರಿಂದ ನಿವೇಶನಕ್ಕೆ ಮನವಿ ಸಲ್ಲಿಸಿದರು ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿ ನಗರದ ತಾಲ್ಲೂಕು ಪಂಚಾಯಿತಿ ಮುಂದೆ ಅಹೋರಾತ್ರಿ ಧರಣಿಯನ್ನ ಹಮ್ಮಿಕೊಂಡಿದ್ದು ಇಂದಿಗೆ ಮೂರನೆ ದಿನಕ್ಕೆ ಕಾಲಿಟ್ಟಿದೆ.