ಬೆಂಗಳೂರು ದಕ್ಷಿಣ: ಶ್ರದ್ಧಾಂಜಲಿ ಬ್ಯಾನರ್ ಹಾಕಿದ್ದವರ ವಿರುದ್ಧ ಜಯನಗರ ಠಾಣೆಯಲ್ಲಿ ಎಫ್ಐಆರ್ ದಾಖಲು
ಪೆಹಲ್ಗಾಮ್ ನಲ್ಲಿ ಮೃತಪಟ್ಟವರಿಗೆ ಶ್ರಂದ್ದಾಂಜಲಿ ಸಲ್ಲಿಸಿ ಬ್ಯಾನರ್ ಕಟ್ಟಿದ್ದವರ ವಿರುದ್ದ ಎಫ್ಐಆರ್ ದಾಖಲು ಮಾಡಲಾಗಿದೆ. ಬಿಬಿಎಂಪಿಯಿಂದ ಅನುಮತಿ ಪಡೆಯದೆ ಬ್ಯಾನರ್ ಹಾಕಿದಕ್ಕೆ FIR ದಾಖಲು ಮಾಡಲಾಗಿದೆ. ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಕಡೆ ಶೃದ್ಧಾಂಜಲಿ ಬ್ಯಾನರ್ ಹಾಕಲಾಗಿತ್ತು. ಜಯನಗರ ಬಿಬಿಎಂಪಿ ಎಇಇ ನೀಡಿದ ದೂರಿನಡಿ FIR ದಾಖಲಿಸಿಕೊಳ್ಳಲಾಗಿದ್ದು, ಬ್ಯಾನರ್ ಹಾಕಿದ ಅಪರಿಚಿತ ವ್ಯಕ್ತಿಯ ಮೇಲೆ ಜಯನಗರ ಠಾಣೆಯಲ್ಲಿ FIR ದಾಖಲಾಗಿದೆ. ಈ ಬಗ್ಗೆ ಮೇ 6ರಂದು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಮಾಹಿತಿ ಹಂಚಿಕೊಂಡಿದ್ದಾರೆ.