ಮಾನವ ಹಕ್ಕುಗಳಲ್ಲಿ ಅತಿ ಮುಖ್ಯವಾದುದು ಸಮಾನತೆಯ ಹಕ್ಕು ;ನಗರದಲ್ಲಿ ಜೆಎಂಎಫ್ಸಿ ಪ್ರಧಾನ ಸಿವಿಲ್ ನ್ಯಾಯಾಧೀಶ ಜಿ.ಹರೀಶ್ ಮಾನವ ಹಕ್ಕುಗಳಲ್ಲಿ ಅತಿ ಮುಖ್ಯವಾದುದು ಸಮಾನತೆಯ ಹಕ್ಕು, ಸಮಾನ ಕಾನೂನು ರಕ್ಷಣೆ, ಶೋಷಣೆಯ ರಹಿತ ಆರೋಗ್ಯ ಪೂರ್ಣ ಪರಿಸರದಲ್ಲಿ ಗೌರವಯುತವಾಗಿ ಜೀವನ ನಡೆಸುವುದು ಮುಖ್ಯ ಎಂದು ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ, ಜೆಎಂಎಫ್ಸಿ ಪ್ರಧಾನ ಸಿವಿಲ್ ನ್ಯಾಯಾಧೀಶ ಜಿ.ಹರೀಶ್ ನುಡಿದರು. ಮುಳಬಾಗಲು ನಗರದ ಅಂಬೇಡ್ಕರ್ ಭವನದಲ್ಲಿ ಬುಧವಾರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.