ಹಾಸನ: ಹಾಸನಾಂಬ ಉತ್ಸವದ ವೇಳೆ ದೇವಾಲಯದಲ್ಲಿ ವಸ್ತ್ರ ಸಮಿತಿ ಜಾರಿ ಮಾಡಿ ಜಿಲ್ಲಾಡಳಿತ ಆದೇಶ
Hassan, Hassan | Oct 6, 2025 ಹಾಸನ: ಹಾಸನಾಂಬ ದೇವಾಲಯದ ಆವರಣದಲ್ಲಿ ದೇವಾಲಯದ ಗರ್ಭಗುಡಿ, ಒಳಾಂಗಣ ಮತ್ತು ಹೊರಾಂಗಣದಲ್ಲಿ ಕೆಲಸ ನಿರ್ವಹಿಸುತ್ತಿರುವ ದೇವಾಲಯದ ನೌಕರರು ಮತ್ತು ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ವಸ್ತç ಸಂಹಿತೆಯನ್ನು ಪಾಲಿಸುವುದು ಖಡ್ಡಾಯಬಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಆದೇಶಿಸಿದೆ.ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ಸೆಕ್ಷನ್ 58ರಡಿಯಲ್ಲಿ ದೇವಸ್ಥಾನದ ರೂಢಿ, ಸಂಪ್ರದಾಯ ಮತ್ತು ಆಚರಣೆಯಂತೆ ದೇವಾಲಯದ ಗರ್ಭಗುಡಿ, ಒಳಾಂಗಣ ಮತ್ತು ಹೊರಾಂಗಣದಲ್ಲಿ ಕೆಲಸ ನಿರ್ವಹಿಸುತ್ತಿರುವ ದೇವಾಲಯದ ನೌಕರರು ಖಡ್ಡಾಯವಾಗಿ ಪಾಲಿಸಲು ಸೂಚಿಸಿದೆ