ಜಿಬಿಎ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಸುರಕ್ಷಾ 75 ಜಂಕ್ಷನ್ಗಳ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ ಸುರಕ್ಷಾ 75 ಜಂಕ್ಷನ್ಗಳ ಅಭಿವೃದ್ಧಿ ಕಾರ್ಯಕ್ಕೆ ಸಂಬಂಧಿಸಿದಂತೆ ಜಿಬಿಎ ಕೇಂದ್ರ ಕಚೇರಿಯಲ್ಲಿ ಗುರವಾರ ಸಂಜೆ 5 ಗಂಟೆ ಸುಮಾರಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅಭಿವೃದ್ಧಿ ಕೈಗೊಳ್ಳಬೇಕಿರುವ ಜಂಕ್ಷನ್ಗಳಿಗೆ ಮುಖ್ಯ ಅಭಿಯಂತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಪ್ರಸ್ತುತ ಇರುವ ವಿನ್ಯಾಸದಲ್ಲಿ ಯಾವುದೇ ಮಾರ್ಪಾಡು ಅಗತ್ಯವಿದ್ದರೆ ಅದನ್ನು ತಕ್ಷಣ ಪರಿಷ್ಕರಿಸಿ, ತ್ವರಿತವಾಗಿ ಕೆಲಸ ಪ್ರಾರಂಭಿಸಿ ಶೀಘ್ರದಲ್ಲಿ ಪೂರ್ಣಗೊಳಿಸಲು ಸೂಚಿಸಿದರು.