ಬೆಂಗಳೂರು ಉತ್ತರ: ದೆಹಲಿ ಕಾರು ಸ್ಫೋಟ ಪ್ರಕರಣ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ
ದೆಹಲಿಯಲ್ಲಿ ನಡೆದ ಕಾರು ಸ್ಫೋಟವನ್ನು ಕಾಂಗ್ರೆಸ್ ಖಂಡಿಸಿದೆ. ದೇಶದ ಐಕ್ಯತೆ, ಸಮಗ್ರತೆ ಮತ್ತು ಶಾಂತಿ ರಕ್ಷಣೆಗಾಗಿ ಉಗ್ರ ಚಟುವಟಿಕೆಗಳ ವಿರುದ್ಧ ಎಚ್ಚರ ವಹಿಸಬೇಕು ಎಂದು ಉಪಮುಖ್ಯಮಂತ್ರಿ ಡಿಕೆಶಿ ಅವರು ಇಂದು ವಿಮಾನ ನಿಲ್ದಾಣದ ಬಳಿ ಹೇಳಿದ್ದಾರೆ. ಕರ್ನಾಟಕ ರಾಜ್ಯದ ಭದ್ರತೆಯ ಬಗ್ಗೆ ಗೃಹ ಸಚಿವರು ಪರಿಶೀಲಿಸುತ್ತಿದ್ದು, ಭದ್ರತೆ ಹೆಚ್ಚಳಕ್ಕೆ ಮುಖ್ಯಮಂತ್ರಿಗಳು ಆದೇಶ ನೀಡಿದ್ದಾರೆ. ಈ ಘಟನೆಯ ಬಗ್ಗೆ ಕೂಡಲೇ ತನಿಖೆ ನಡೆಸಿ, ಸ್ಫೋಟದ ಹಿಂದಿರುವ ಉಗ್ರರಿಗೆ ಶಿಕ್ಷೆ ನೀಡಲು ಕೇಂದ್ರದ ಮೇಲೆ ಒತ್ತಡ ಹಾಕುವುದಾಗಿ ಕಾಂಗ್ರೆಸ್ ತಿಳಿಸಿದೆ.