ಸವದತ್ತಿ: ಉಗರಗೋಳ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ವಿಶ್ವಾಸ ವೈದ್ಯ ಚಾಲನೆ
ಉಗರಗೋಳ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ವಿಶ್ವಾಸ ವೈದ್ಯ ಚಾಲನೆ ನೀಡಿದರು. ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಬುಧವಾರ ಶಾಸಕ ವಿಶ್ವಾಸ ವೈದ್ಯ ಅವರು ಚಾಲನೆ ನೀಡಿದರು ಈ ಸಂದರ್ಭದಲ್ಲಿ ಮಾತನಾಡಿದ ಅವರು. ಉಗರಗೋಳ ಮತ್ತು ಹರ್ಲಾಪುರ ಗ್ರಾಮಗಳ ನಡುವಿನ ಸಂಪರ್ಕವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿಡಲಾಗಿದೆ. ಲೋಕೋಪಯೋಗಿ ಇಲಾಖೆಯ ಅಡಿಯಲ್ಲಿ, ಅಂದಾಜು ₹1.50 ಕೋಟಿ ವೆಚ್ಚದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಇಂದು ಭೂಮಿ ಪೂಜೆ ನೆರೆವೆರಿಸವಾಗಿದೆ ಎಂದರು