ಮಂಗಳೂರು: ದಕ್ಷಿಣ ಕನ್ನಡದಲ್ಲಿ ಆಸ್ಪತ್ರೆ ಕ್ಯಾಂಟೀನ್ ಹಾಗೂ ಬೇಕರಿಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ
ದಕ್ಷಿಣ ಕನ್ನಡ ಜಿಲ್ಲೆಯ ಶ್ರೀನಿವಾಸ ಆಸ್ಪತ್ರೆ ಹಾಗೂ ಮುಲ್ಕಿ-ಕಾರ್ನಾಡ್ ಭಾಗದ ಬೇಕರಿಗಳಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ದಿಢೀರ್ ಪರಿಶೀಲನೆ ನಡೆಸಿದ್ದಾರೆ. ಕಳಪೆ ಗುಣಮಟ್ಟ ಮತ್ತು ಕೃತಕ ಬಣ್ಣ ಬಳಕೆಯ ಶಂಕೆಯ ಹಿನ್ನೆಲೆಯಲ್ಲಿ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ನಿಯಮ ಮೀರಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.