ಬೈಲಹೊಂಗಲ: ಬೈಲಹೊಂಗಲದಲ್ಲಿ ಬಸ್ನಿಂದ ಬಿದ್ದು ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಅನಿಗೋಳ ಗ್ರಾಮದ ಬಳಿ ಬಸ್ಸಿನ ಬಾಗಿಲಿಗೆ ಜೋತುಬಿದ್ದು ಪ್ರಯಾಣಿಸುತ್ತಿದ್ದ ಇಬ್ಬರು ವಿದ್ಯಾರ್ಥಿಗಳು, ಹತ್ತಿ ಮೂಟೆಯ ವಾಹನ ತಗುಲಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ 17 ವರ್ಷದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.