ಚಾಮರಾಜನಗರ: ಈಡಿಗ ಸಮುದಾಯ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು : ನಗರದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ
ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ವರನಟ ಡಾ.ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬ್ರಹ್ಮ ಶ್ರೀ ನಾರಾಯಣಗುರು ಜಯಂತಿಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಈಡಿಗ ಸಮುದಾಯದವರು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ತಿಳಿಸಿದರು.