ಬೆಂಗಳೂರು ಉತ್ತರ: ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪೊಲೀಸ್ ಹೈ ಅಲರ್ಟ್
ಹೊಸ ವರ್ಷವನ್ನು ಸ್ವಾಗತಿಸಲು ಬೆಂಗಳೂರು ಸಜ್ಜಾಗುತ್ತಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ನಗರದಾದ್ಯಂತ ಹೈ ಅಲರ್ಟ್ ಘೋಷಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಡಿಸಿಪಿ ಎಂ. ನಾರಾಯಣ್ ನೇತೃತ್ವದಲ್ಲಿ ನೀಲಾದ್ರಿ ನಗರದಲ್ಲಿ ಪೊಲೀಸರು ರೌಂಡ್ಸ್ ನಡೆಸುತ್ತಿದ್ದಾರೆ. 20ರಿಂದ 35 ಸಾವಿರ ಜನರು ಸೇರುವ ನಿರೀಕ್ಷೆಯಿರುವ ಈ ಪ್ರದೇಶದಲ್ಲಿ ಮಹಿಳೆಯರ ಸುರಕ್ಷತೆಗಾಗಿ 'ರಾಣಿ ಚೆನ್ನಮ್ಮ ಪಡೆ'ಯನ್ನು ನಿಯೋಜಿಸಲಾಗಿದೆ. ಪಬ್, ಬಾರ್, ರೆಸ್ಟೋರೆಂಟ್ ಗಳಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಲು ಸೂಚನೆ ನೀಡಲಾಗಿದ್ದು