ಬಬಲೇಶ್ವರ: ಕಾಖಂಡಕಿ ಗ್ರಾಮದಲ್ಲಿ ಸೇವಾಲಾಲ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ನಾಟಕ ಕಾರ್ಯಕ್ರಮ ಉದ್ಘಾಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಜಿಡಿ ಅಂಗಡಿ
ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಖಂಡಿಕಿ ಗ್ರಾಮದಲ್ಲಿ ಸಂತ ಸೇವಾಲಾಲ್ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ನಾಟಕ ಕಾರ್ಯಕ್ರಮವನ್ನು ಭಾನುವಾರ ರಾತ್ರಿ 8ಗಂಟೆ ಸುಮಾರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಸಂತ ಸೇವಾಲಾಲ್ ಅವರು ತಮ್ಮ ಜೀವನ ಉದ್ದಕ್ಕೂ ಶೋಷಿತರ ಪರವಾಗಿ ಹೋರಾಟ ಮಾಡಿ ಅವರಿಗೆ ಜಾಗೃತಿ ಮೂಡಿಸಿದವರು. ಅಂಥವರ ಜೀವನದ ನಾಟಕ ಕಾರ್ಯಕ್ರಮ ಇಂದು ಉದ್ಘಾಟನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಮಾಜದ ಮುಖಂಡರುಗಳು ಹಾಗೂ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.