ಮಳವಳ್ಳಿ: ತಾಲ್ಲೂಕಿನ ಪೂರಿಗಾಲಿ ಗ್ರಾಮದ ತಮ್ಮ ನಿವಾಸ ದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಂಡ ಶಾಸಕರಾದ ನರೇಂದ್ರಸ್ವಾಮಿ
ಮಳವಳ್ಳಿ ; ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಂಡ ಕ್ಷೇತ್ರದ ಶಾಸಕರು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಆದ ಪಿ ಎಂ ನರೇಂದ್ರಸ್ವಾಮಿ ಅವರು ಸಿಬ್ಬಂದಿ ಗಳಿಗೆ ಕುಟುಂಬದವರ ಅಗತ್ಯ ಮಾಹಿತಿಯನ್ನು ನೀಡಿದರು. ಭಾನುವಾರ ಸಾಯಂಕಾಲ 4.30 ರ ಸಮಯದಲ್ಲಿ ಮಳವಳ್ಳಿ ತಾಲ್ಲೂಕಿನ ಪೂರಿಗಾಲಿ ಗ್ರಾಮದ ನಿವಾಸಕ್ಕೆ ಆಗಮಿಸಿದ ಸಮೀಕ್ಷಾ ಸಿಬ್ಬಂದಿಗೆ ಮಾಹಿತಿ ನೀಡಿದರು. ನಂತರ ಸಿಬ್ಬಂದಿಯಿಂದ ದೃಢೀ ಕರಣ ಪತ್ರವನ್ನು ಸ್ವೀಕರಿಸಿದರು.