ಶ್ರೀರಂಗಪಟ್ಟಣ ತಾಲೂಕಿನ ಪಶ್ಚಿಮವಾಹಿ ಬಳಿ ವಾಹನದಲ್ಲಿ ಅಕ್ರಮ ಗೋಮಾಂಸ ಸಾಗಣೆ, ಮಾಂಸ ಜಪ್ತಿ ಶ್ರೀರಂಗಪಟ್ಟಣ ತಾಲೂಕಿನ ಪಶ್ಚಿಮವಾಹಿ ಬಳಿ ಹುಣಸೂರಿನಿಂದ ರಾಮನಗರಕ್ಕೆ ಹೋಗುತ್ತಿದ್ದ ಗೂಡ್ ವಾಹನವೊಂದರಲ್ಲಿ ಅಕ್ರಮವಾಗಿ ಗೋಮಾಂಸ ಸಾಗಣೆ ಮಾಡುತ್ತಿದ್ದ ಬಗ್ಗೆ ಹಿಂದೂ ಸಂಘಟನೆಯ ಮುಖಂಡರು ಮಾಹಿತಿ ಪಡೆದು, ವಾಹನವನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವೇಳೆ ವಾಹನದ ಚಾಲಕನೊಂದಿಗೆ ಗೋಮಾಂಸ ಹಾಗೂ ಗೋವುಗಳ ಚರ್ಮವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.