ಚಾಮರಾಜನಗರ: ಅತಿಥಿ ಶಿಕ್ಷಕರು, ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಜ್ಯಾದ್ಯಂತ ಹೋರಾಟ: ನಗರದಲ್ಲಿ ರಾಜ್ಯಾಧ್ಯಕ್ಷ ಮಂಜುನಾಥಪ್ರಸಾದ್
ಅತಿಥಿ ಶಿಕ್ಷಕರು, ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಜ್ಯಾದ್ಯಂತ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ಮಾಡಬೇಕಾಗುತ್ತದೆ ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಸಂಘ ರಾಜ್ಯಾಧ್ಯಕ್ಷ ಮಂಜುನಾಥಪ್ರಸಾದ್ ರಾಜ್ಯ ಸರ್ಕಾರವನ್ನು ಎಚ್ಚರಿಸಿದರು. ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು