ಬಂಗಾರಪೇಟೆ: ಮನುಷ್ಯನ ಸರ್ವತೋಮುಖ ಅಭಿವೃದ್ಧಿಗೆ ಕ್ರೀಡೆ ಸಹಕರಿಸುತ್ತದೆ : ಬೂದಿಕೋಟೆ ಯಲ್ಲಿ ಜಯಶ್ರೀ.
ಮನುಷ್ಯನ ಸರ್ವತೋಮುಖ ಅಭಿವೃದ್ಧಿಗೆ ಕ್ರೀಡೆ ಸಹಕರಿಸುತ್ತದೆ - ಜಯಶ್ರೀ. ಬೂದಿಕೋಟೆ : ಕ್ರೀಡೆ ಎಂಬುವುದು ಮನುಷ್ಯನ ಸರ್ವತೋಮುಖ ಅಭಿವೃದ್ಧಿಗೆ ಸಹಕಾರವಾಗುತ್ತದೆ ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯು ಕ್ರೀಡೆಯಲ್ಲಿ ಭಾಗವಹಿಸಿ ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಜಯಶ್ರೀ ಹೇಳಿದರು. ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮೆಡಲ್ ಹಾಗೂ ಸರ್ಟಿಫಿಕೇಟ್ ನೀಡಿ ಅಭಿನಂದನೆ ಸಲ್ಲಿಸಿ ಮಾತನಾಡಿದರು.