ಶಿರಸಿ :ನಗರದಲ್ಲಿ ಸಂಸದ ಕಾಗೇರಿ ಉನ್ನತ ಅಧಿಕಾರಿಗಳೊಂದಿಗೆ ಬಿಎಸ್ಎನ್ಎಲ್ ನೆಟ್ವರ್ಕ್ ಸಮಸ್ಯೆಯ ಕುರಿತು ಮಹತ್ವದ ಸಭೆ ನಡೆಸಿದರು.ಕ್ಷೇತ್ರದಾದ್ಯಂತ ಬಿಎಸ್ಎನ್ಎಲ್ ನೆಟ್ವರ್ಕ್ ಸಮಸ್ಯೆಯಿಂದ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಎದುರಿಸುತ್ತಿರುವ ತೊಂದರೆಗಳ ಕುರಿತು ಚರ್ಚಿಸಿದರು. ಹೊಸದಾಗಿ ನಿರ್ಮಾಣವಾಗಿರುವ ಮೊಬೈಲ್ ಟವರ್ಗಳಲ್ಲಿನ ತಾಂತ್ರಿಕ ದೋಷಗಳನ್ನು ತಕ್ಷಣವೇ ಸರಿಪಡಿಸಿ, ಗುಣಮಟ್ಟದ ನೆಟ್ವರ್ಕ್ ಸೌಲಭ್ಯವನ್ನು ಒದಗಿಸಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.