ತುಮಕೂರು: ಪತ್ರಿಕಾ ಸ್ವಾತಂತ್ರ್ಯದಲ್ಲಿ ಭಾರತ 151ನೇ ಸ್ಥಾನದಲ್ಲಿರುವುದು ಶೋಚನೀಯ: ನಗರದಲ್ಲಿ ಸಿಎಂ ಮಾಧ್ಯಮ ಸಲಹೆಗಾರ ಪ್ರಭಾಕರ್
ಪತ್ರಿಕಾ ಸ್ವಾತಂತ್ರ್ಯದಲ್ಲಿ 181 ದೇಶಗಳ ಪೈಕಿ ಭಾರತ 151 ನೇ ಸ್ಥಾನದಲ್ಲಿ ಇದು ಅತ್ಯಂತ ಶೋಚನೀಯ ಸಂಗತಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ. ವಿ. ಪ್ರಭಾಕರ್ ಆತಂಕ ವ್ಯಕ್ತಪಡಿಸಿದರು. ತುಮಕೂರು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಭಾನುವಾರ ಮಧ್ಯಾಹ್ನ 2.30 ರ ಸಮಯದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ಪತ್ರಿಕಾ ದಿನಾಚರಣೆ, ಕೃತಜ್ಞತಾ ಸಮಾರಂಭ, ವಾರ್ಷಿಕ ದತ್ತಿ ಪ್ರದಾನ ಸಮಾರಂಭ, ಹಿರಿಯ ಪತ್ರಕರ್ತರಿಗೆ ಸನ್ಮಾನ ಹಾಗೂ ಸರ್ವ ಸದಸ್ಯರ ವಾರ್ಷಿಕ ಸಭೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪ್ರಧಾನ ಭಾಷಣ ಮಾಡಿದರು.