ಹುಬ್ಬಳ್ಳಿ-ಧಾರವಾಡಕ್ಕೆ ಸ್ಮಾರ್ಟ್ ಸಿಟಿ ಪಟ್ಟ ಬಂದ ನಂತರ ಅಭಿವೃದ್ಧಿ ಕಾರ್ಯಗಳು ನಿಂತುಹೋಗಿವೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಅನೇಕ ಕಳಪೆ ಕಾಮಗಾರಿಗಳು ನಡೆದಿವೆ. ಈಗ ಫೈ ಓವರ್ ಕಾಮಗಾರಿ ನಡೆಯುತ್ತಿದ್ದು, ಇದರಿಂದ ನಗರದಲ್ಲಿ ಧೂಳು ಮತ್ತು ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ. ಧೂಳಿನಿಂದಾಗಿ ಅನೇಕರು ಅಸ್ತಮಾದಿಂದ ಬಳಲುತ್ತಿದ್ದಾರೆ. ಕಾಮಗಾರಿಗಳು ಅತ್ಯಂತ ನಿಧಾನಗತಿಯಲ್ಲಿ ನಡೆಯುತ್ತಿವೆ, ಇದರಿಂದಾಗಿ ಜನರು ಬೇಸತ್ತು ಹೋಗಿದ್ದಾರೆ.