ಚಳ್ಳಕೆರೆ: ಗಿರಿಯಮ್ಮನಹಳ್ಳಿ ಬಳಿ ಲಾರಿಗೆ ಕಾರು ಡಿಕ್ಕಿ: ಫೋಟೋ ಗ್ರಾಫರ್ ಸಾವು
ಶುನಿವಾರ ಬೆಳಗಿನ ಜಾವ 4 ಗಂಟೆ ವೇಳೆ ಗಿರಿಯಮ್ಮನಹಳ್ಳಿ ಬಳಿ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದ್ದು, ಶಿವಮೊಗ್ಗ ಮೂಲದ ಫೋಟೋ ಗ್ರಾಫರ್ ಸಾವನ್ನಪ್ಪಿದ್ದಾರೆ.ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಗಿರಿಯಮ್ಮನಹಳ್ಳಿ ಬಳಿ ಹೈವೆಯಲ್ಲಿ ಘಟನೆ ಸಂಭವಿಸಿದೆ. ಘಟನೆಯಲ್ಲಿ ಫೋಟೋ ಗ್ರಾಫರ್ ಅರ್ಜುನ್ (35) ಎಂಬ ಯುವಕ ಮೃತ ಪಟ್ಟಿದ್ದಾನೆ. ಸ್ನೇಹಿತರ ಜೊತೆ ಕಾರಿನಲ್ಲಿ ಬಳ್ಳಾರಿಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಬಳ್ಳಾರಿಯಲ್ಲಿ ಮದುವೆ ಕಾರ್ಯಕ್ರಮದ ಫೋಟೋ ಶೂಟ್ ಮಾಡಲು ತೆರಳುತ್ತಿದ್ದರು ಎನ್ನಲಾಗಿದೆ.ಘಟನೆಯಲ್ಲಿ ನವೀನ್, ಬಸವರಾಜ್, ಸ್ವರೂಪ್, ಸೇರಿ ನಾಲ್ವರಿಗೆ ಗಾಯಗಳಾಗಿದ್ದು, ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಗೆ ಗಾಯಾಳುಗಳನ್ನ ರವಾನೆ ಮಾಡಲಾಗಿದೆ