ವಿಜಯಪುರ: ಬಿಜೆಪಿ ಹೈಕಮಾಂಡ್ ಗೆ ನನ್ನ ವರ್ಚಸ್ಸು ಏನು ಅಂತಾ ಗೊತ್ತಾಗಿದೆ, ನಗರದಲ್ಲಿ ಶಾಸಕ ಯತ್ನಾಳ್ ಹೇಳಿಕೆ
ಬಿಜೆಪಿ ಹೈಕಮಾಂಡ್ ಗೆ ನನ್ನ ವರ್ಚಸ್ಸು ಏನು ಎಂಬುದು ಗೊತ್ತಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇಂದ್ರದ ಸಚಿವರ ಮುಂದೆ ಮಾತನಾಡಿದ್ದಾರೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ದೊಡ್ಡ ತಪ್ಪು ಮಾಡಿದ್ದೇನೆ. ಕರ್ನಾಟಕ ರಾಜ್ಯದಲ್ಲಿ ವಿಜಯೇಂದ್ರ ಹಾಗೂ ಯಡಿಯೂರಪ್ಪನವರ ವರ್ಚಸ್ಸು ಏನು ಇಲ್ಲ ಎಂಬುದು ಈಗ ನನಗೆ ಮನವರಿಕೆ ಆಗಿದೆ ಎಂದು ಕೇಂದ್ರ ಗೃಹ ಸಚಿವರು ಹೇಳಿದ್ದಾರೆ ಎಂದು ವಿಜಯಪುರದಲ್ಲಿ ಭಾನುವಾರ ಸಾಯಂಕಾಲ 4ಗಂಟೆ ಸುಮಾರಿಗೆ ಮಾಧ್ಯಮಕ್ಕೆ ಶಾಸಕ ಬಸನಗೌಡ ಪಾಟೀಲ ಹೇಳಿದರು.