ಯೋಗಾಭ್ಯಾಸ ಮಾಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ನಗರದ ಚಾಮುಂಡಿಬೆಟ್ಟ ಆವರಣದಲ್ಲಿ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಯೋಗ ದಸರಾ ಉಪ ಸಮಿತಿ ವತಿಯಿಂದ ಮಂಗಳವಾರ ಆಯೋಜಿಸಿದ್ದ ಯೋಗ ಚಾರಣ ಮತ್ತು ಯೋಗ ನಮಸ್ಕಾರ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು. ಭಾರತದಲ್ಲಿ ಹುಟ್ಟಿರುವ ಯೋಗವು ಪ್ರಧಾನಿಮಂತ್ರಿ ನರೇಂದ್ರ ಮೋದಿಯವರಿಂದ ವಿಶ್ವ ಮನ್ನಣೆ ಪಡೆದುಕೊಂಡಿದೆ. ಯೋಗ ಮಾಡುವುದರಿಂದ ರಕ್ತ ಪರಿಚಲನವಾಗಿ, ಮನಸ್ಸು ಮತ್ತು ದೇಹ ಆರೋಗ್ಯದಿಂದಿರಲು ಸಹಕಾರಿಯಾಗುತ್ತದೆ ಎಂದರು.