ಔರಾದ್: ಔರಾದ್ ಪಟ್ಟಣ ಪುರಸಭೆಯಾಗಿ ಮೇಲ್ದರ್ಜೆಗೆ ಕಾಂಗ್ರೆಸ್ ಮುಖಂಡ ಭೀಮಸೇನರಾವ್ ಸಿಂಧೆ ನೇತೃತ್ವದಲ್ಲಿ ಬೆಂಗಳೂರಲ್ಲಿ ಸಿ.ಎಂ, ಡಿಸಿಎಂಗೆ ಸನ್ಮಾನ
Aurad, Bidar | Oct 19, 2025 ಪಟ್ಟಣ ಪಂಚಾಯತಿಯಾಗಿದ್ದ ಅವರನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸಿದ ಹಿನ್ನೆಲೆಯಲ್ಲಿ ಔರಾದ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಭೀಮ್ಸೇನ್ ರಾವ್ ಸಿಂಧೆ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಭಾನುವಾರ ಬೆಳಿಗ್ಗೆ 10.30 ಕ್ಕೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.