ಕೃಷ್ಣರಾಜಪೇಟೆ: ಅಣ್ಣೆಚಾಕನಹಳ್ಳಿ ಗ್ರಾಮದಲ್ಲಿ ನಾಲೆಗೆ ಬಿದ್ದು ಮಹಿಳೆ ಸಾವು
ಕೆ. ಆರ್. ಪೇಟೆ ತಾಲೂಕಿನ ಅಣ್ಣೆಚಾಕನಹಳ್ಳಿ ಗ್ರಾಮದಲ್ಲಿ ನಾಲೆಗೆ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಜರುಗಿದೆ. ಅಣ್ಣೆಚಾಕನಹಳ್ಳಿ ಗ್ರಾಮದಲ್ಲಿ 42 ವರ್ಷದ ಶಿಲ್ಪಾ ಎಂಬ ಮಹಿಳೆ ಹೇಮಾವತಿ ಬಲದಂಡೆ ಕಾಲುವೆಯಲ್ಲಿ ಕಾಲು ತೊಳೆಯಲು ಹೋಗಿ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಕಿಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಕಿಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ