ಶಿವಮೊಗ್ಗ: ನಗರದ ಅಕ್ಕಮಹಾದೇವಿ ವೃತ್ತದ ಬಳಿ ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಸಂಸದರಿಂದ ಚಾಲನೆ
ಶಿವಮೊಗ್ಗ ನಗರದ ಅಕ್ಕಮಹಾದೇವಿ ವೃತ್ತದ ಫ್ಲೈ ಓವರ್ ಸುತ್ತಮುತ್ತಲಿನ ಪ್ರದೇಶಗಳ ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ಗುರುವಾರ ನೆರವೇರಿಸಲಾಯಿತು. ಶಿವಮೊಗ್ಗ ಮಹಾನಗರ ಪಾಲಿಕೆ ಮತ್ತು ಭಾರತೀಯ ರೈಲ್ವೆ ಇಲಾಖೆಯ ಜಂಟಿ ಸಹಯೋಗದೊಂದಿಗೆ ನಡೆಯಲಿರುವ ಈ ಕಾಮಗಾರಿಗೆ ಸಂಸದ ಬಿ ವೈ ರಾಘವೇಂದ್ರ ಅವರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಶಾಸಕ ಚನ್ನಬಸಪ್ಪ,ಎಂಎಲ್ಸಿ ಡಾ.ಧನಂಜಯ್ ಸರ್ಜಿ ಸೇರಿದಂತೆ ಹಲವರು ಉಪಸಿತರಿದ್ದರು.