ಮುಂಡಗೋಡ, : ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಮುಂಡಗೋಡ ಶಾಖೆಯ ನೂತನ ಕಟ್ಟಡವನ್ನು ಶಾಸಕ ಶಿವರಾಮ ಹೆಬ್ಬಾರ್ ಉದ್ಘಾಟಿಸಿದರು. ಪಟ್ಟಣದ ಲೋಯೋಲಾ ವಿದ್ಯಾಕೇಂದ್ರದಲ್ಲಿ ಆಯೋಜಿಸಿದ್ದ ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷಾದ ಸಿ.ಎಸ್.ಷಡಾಕ್ಷರಿ. ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರು, ಮಾಜಿ ಶಾಸಕರಾದ ವಿ.ಎಸ್.ಪಾಟೀಲ್, ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಕೃಷ್ಣ ಹಿರೇಹಳ್ಳಿ ಸೇರಿದಂತೆ ತಾಲೂಕಾ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಇತರರು ಉಪಸ್ಥಿತರಿದ್ದರು.