ಕೋಲಾರ: ಡಿಸಿಸಿ ಬ್ಯಾಂಕಿನಲ್ಲಿ 500 ಕಡತ ನಾಪತ್ತೆ : ನಗರದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಆರೋಪ
Kolar, Kolar | Nov 20, 2025 ಡಿಸಿಸಿ ಬ್ಯಾಂಕಿನಲ್ಲಿ ೫೦೦ ಕಡತ ನಾಪತ್ತೆ ಶಾಸಕ ಕೊತ್ತೂರು ಮಂಜುನಾಥ್ ಆರೋಪ ಡಿಸಿಸಿ ಬ್ಯಾಂಕಿನಲ್ಲಿ ಸಾಲ ವಿತರಿಸಿದ ೫೦೦ ಕಡತಗಳೇ ನಾಪತ್ತೆಯಾಗಿದೆ, ರೈತರು,ಬಡ ಮಹಿಳೆಯರ ಹೆಸರಿನಲ್ಲಿ ಯಾರೇ ಹಣ ನುಂಗಿದ್ದರು ಬರಬಾರದ ರೋಗ ಬರಲಿ, ಬ್ಯಾಂಕನ್ನು ಸರಿಪಡಿಸುವ ಪ್ರಯತ್ನ ನಾನು ಪ್ರಾಮಾಣಿಕವಾಗಿ ಮಾಡುವೆ ಎಂದು ಶಾಸಕ ಕೊತ್ತುರು ಮಂಜುನಾಥ್ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಒಕ್ಕೂಟ, ಡಿಸಿಸಿ ಬ್ಯಾಂಕ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ, ಸಹಕಾರ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ೭೨ನೇ ಅಖಿಲಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರ