ಚಾಮರಾಜನಗರ: ಪ್ರಧಾನ ಮಂತ್ರಿ ಮೋದಿ ಜನ್ಮ ದಿನದಂದು ನಗರದಲ್ಲಿ ರಾಷ್ಟ್ರೀಯ ನಿರುದ್ಯೋಗಗಳ ದಿನಾಚರಣೆ, ಯೂತ್ ಕಾಂಗ್ರೆಸ್ ನಿಂದ ಪಕೋಡ ಮಾಡಿ ಪ್ರತಿಭಟನೆ
ಚಾಮರಾಜನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜನ್ಮದಿನದಂದು ರಾಷ್ಟ್ರೀಯ ನಿರುದ್ಯೋಗಿಗಳ ದಿನಾಚರಣೆಯ್ನಾಗಿ ಜಿಲ್ಲಾ ಯೂತ್ ಕಾಂಗ್ರೆಸ್ ನಿಂದ ವಿನೂತನ ಪ್ರತಿಭಟನೆ ನಡೆಸಿದರು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನ ಮುಂಭಾಗ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪಕೋಡ, ಟೀ ಹಾಗೂ ತರಕಾರಿ ವ್ಯಾಪಾರ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.