ರಬಕವಿ-ಬನಹಟ್ಟಿ: ಅಂದು ಖಾಸಗಿ ಬ್ಯಾರೇಜ್ ನಿರ್ಮಾಣಕ್ಕೆ ಅನುಮತಿ ಕೊಟ್ಟಿದ್ದು ಮಾಜಿ ಪ್ರಧಾನಿ ದೇವೇಗೌಡರು,ಬಂಡಿಗಣಿಯಲ್ಲಿ ಮಾಜಿ ಶಾಸಕ ಆನಂದ ನ್ಯಾಮಗೌಡ
ದಿ.ಮಾಜಿ ಕೇಂದ್ರ ಸಚಿವ ಸಿದ್ದು ನ್ಯಾಮಗೌಡರ ನೇತೃತ್ವದಲ್ಲಿ ಕೃಷ್ಣ ತೀರದ ರೈತರಿಗೆ ಖಾಸಗಿ ಬ್ಯಾರೇಜ್ ನಿರ್ಮಾಣಕ್ಕೆ ಅನುಮತಿ ನೀಡಿದ್ದು ಮಾಜಿ ಪ್ರಧಾನಿ ದೇವೇಗೌಡರು ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಅವರು ಹೇಳಿದ್ದಾರೆ.ಬಾಗಲಕೋಟೆ ಜಿಲ್ಲೆಯ ಬಂಡಿಗಣಿ ಗ್ರಾಮದಲ್ಲಿ ಮಾತನಾಡಿರುವ ಅವರು,ಈ ಭಾಗದ ಹಸಿರು ಕ್ರಾಂತಿಗೆ ದೇವೇಗೌಡರ ದೊಡ್ಡ ಕೊಡುಗೆ ಇದೆ ಎಂದು ಅವರು ಅನೇಕ ವಿಚಾರಗಳನ್ನ ಹಂಚಿಕೊಂಡಿದ್ದಾರೆ.ಅವರ ಹೆಸರಿನ ಸೇತುವೆ ಕೂಡ ಇದ್ದು ಅದನ್ನ ಮೇಲ್ದರ್ಜೆಗೆ ಏರಿಸಲಾಗಿದೆ ಎಂದು ಹೇಳಿದರು.