ಬಂಗಾರಪೇಟೆ: ರೈತ ಹಾಗೂ ಜನ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯಿರಿ : ಪಟ್ಟಣದಲ್ಲಿ ರೈತ ಮುಖಂಡ ಪಿ.ಆರ್.ಸೂರ್ಯನಾರಾಯಣ
ರೈತ ಹಾಗೂ ಜನ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯಿರಿ : ಪಿ.ಆರ್.ಸೂರ್ಯನಾರಾಯಣ ರಾಜ್ಯ ಸರ್ಕಾರ ಜಾರಿಗೊಳಿಸಿರುವ ರೈತ ಹಾಗೂ ಜನ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಬಂಗಾರಪೇಟೆ ಪಟ್ಟಣದ ಕನಕ ಭವನದಲ್ಲಿ ಬುಧವಾರ ಕರ್ನಾಕಟ ಪ್ರಾಂತ ರೈತ ಸಂಘದ ೬ನೇ ತಾಲೂಕು ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನಪರ ಆಡಳಿತ ನೀಡದೆ ಜನವಿರೋಧಿ ನೀತಿಯನ್ನು ಪಾಲಿಸುತ್ತಿದೆ ಎಂದು ಟೀಕಿಸಿದರು.ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬರುವ ಸರ್ಕಾರಗಳು ನಂತರ ರೈತ ಪರ ಆಡಳಿತ ನೀಡದೆ ಜನ ವಿರ