ಮಂಗಳವಾರ ಮಧ್ಯಾಹ್ನ 12ಕ್ಕೆ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ, ವಾಯು ಮಾಲಿನ್ಯ ನಿಯಂತ್ರಣಾ ಜಾಗೃತಿ ಮಾಸಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಬಿ.ಕೆ. ಸಂತೋಷ್ ಅವರು ಉದ್ಘಾಟಿಸಿದರು. ಪ್ರಾಂಶುಪಾಲೆ ಗೀತಾ ಎಸ್. ವಾಲೀಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಹಾಯಕ ಪ್ರಾಧ್ಯಾಪಕರಾದ ಡಾ. ಕಾರುಣ್ಯ ಶೆಟ್ಟಿ, ಸಂಜು ಹಾಗೂ ಇನ್ನಿತರರು ಇದ್ದರು