ಹೊಸಪೇಟೆ: ಮರಿಯಮ್ಮನಹಳ್ಳಿ ದೇವಸ್ಥಾನದ ಹುಂಡಿಯಲ್ಲಿ ಸಂಗ್ರಹವಾಯ್ತು 5.68 ಲಕ್ಷ ರೂಪಾಯಿ!
ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯ ಶ್ರೀ ಲಕ್ಷ್ಮೀನಾರಾಯಣಸ್ವಾಮಿ ಮತ್ತು ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಒಟ್ಟು 5,68,530 ರೂಪಾಯಿ ನಗದು ಸಂಗ್ರಹವಾಗಿದೆ. ತಹಶೀಲ್ದಾರ್ ಶೃತಿ ಎಂ. ಮಲ್ಲಪ್ಪಗೌಡರ್ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಈ ಪ್ರಕ್ರಿಯೆ ನಡೆಯಿತು.