ವಿಜಯಪುರ: KPSC ಪರೀಕ್ಷೆ ಹಿನ್ನೆಲೆ ಬಿಗಿ ಬಂದೋಬಸ್ತ್, ಅಧಿಕಾರಿಗಳಿಗೆ ಎಸ್ಪಿ ಸೂಚನೆ
ನವೆಂಬರ್ 15, 2026 ರಂದು ನಡೆಯಲಿರುವ ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಯ ಬಂದೋಬಸ್ತ್ ಕುರಿತು ವಿಜಯಪುರದಲ್ಲಿ ಸಭೆ ನಡೆದಿದೆ. ಎಸ್ಪಿ ಲಕ್ಷ್ಮಣ್ ನಿಂಬರಗಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಪರೀಕ್ಷೆಯನ್ನು ಯಾವುದೇ ಲೋಪದೋಷಗಳಿಲ್ಲದೆ ವ್ಯವಸ್ಥಿತವಾಗಿ ನಡೆಸುವಂತೆ ಸೂಚನೆ ನೀಡಲಾಗಿದೆ.