ಬಳ್ಳಾರಿ: ಕಲ್ಯಾಣ ಕರ್ನಾಟಕ ಉತ್ಸವ: ಬಳ್ಳಾರಿ ನಗರದಲ್ಲಿ ಸಚಿವ ರಹೀಂ ಖಾನ್ ಧ್ವಜಾರೋಹಣ
ಬಳ್ಳಾರಿ:ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರುಬುಧವಾರ ಬೆಳಿಗ್ಗೆ 9ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ(ಮಾ.ಪು) ಕಾಲೇಜು ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು.ನಂತರ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಸಚಿವರು ಕಲ್ಯಾಣ-ಕರ್ನಾಟಕ ಭಾಗವನ್ನು ನಿಜಾಮರ ಆಳ್ವಿಕೆಯಿಂದ ಸ್ವಾತಂತ್ರ್ಯಗೊಳಿಸಲು, ಕಲ್ಯಾಣ ಕರ್ನಾಟಕ ವಿಮೋಚನಾ ಹೋರಾಟದಲ್ಲಿ ಶ್ರಮಿಸಿದ ಎಲ್ಲಾ ಮಹನೀಯರನ್ನು ಮರೆಯಬಾರದು. ಅವರ ತ್ಯಾಗ, ಬಲಿದಾನಗಳ ಸ್ಮರಣೆ ಮುಂದಿನ ಪೀಳಿಗೆಗೂ ಅಗತ್ಯ ಇದೆ ಅಭಿಪ್ರಾಯ ಪಟ್ಟರು. ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ವಿಶೇಷ ಸ್ಥಾನಮಾನ ಕಲ್ಪಿಸುವ ಹಿತ ದೃಷ್ಟಿಯಿಂದ ಸಂವಿಧಾನ ತಿದ್ದುಪಡಿ ಕಾಯ್ದೆಯಲ್ಲಿ