ಪ್ರತಿಯೊಬ್ಬ ವ್ಯಕ್ತಿಯ ಘನತೆಯ ಬದುಕಿನ ಹಕ್ಕನ್ನು ಗೌರವಿಸಿ, ಸರ್ವರನ್ನೂ ಸಮಾನವಾಗಿ ಕಾಣುವ ಸಮಾಜ ನಿರ್ಮಾಣ ಮಾಡಬೇಕಿರುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಭವನದಲ್ಲಿ ಬುಧವಾರ ಬೆಳಿಗ್ಗೆ 11 ಗಂಟೆಗೆ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಾನವ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದು ತಿ