ಗುಳೇದಗುಡ್ಡ: 5 ಕೋಟಿ ₹ ವೆಚ್ಚದಲ್ಲಿ ಗುಳೇದಗುಡ್ಡಕ್ಕೆ 3 ಕರ್ನಾಟಕ ಪಬ್ಲಿಕ್ ಸ್ಕೂಲ್ ಮಂಜೂರು : ಶಾಸಕ ಬಿ. ಬಿ. ಚಿಮ್ಮನಕಟ್ಟಿ ಹೇಳಿಕೆ
ಗುಳೇದಗುಡ್ಡ ಪಟ್ಟಣಕ್ಕೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳನ್ನು ಮಂಜೂರು ಮಾಡಿದೆ ಎಂದು ಶಾಸಕ ಬಿ. ಬಿ. ಚಿಮ್ಮನಕಟ್ಟಿ ಅವರು ಹೇಳಿದರು ಅವರು ಕೂಡ ಪಟ್ಟಣದಲ್ಲಿ 14 ಲಕ್ಷ ರುಪಾಯಿ ವೆಚ್ಚದಲ್ಲಿ ಹೊಸ ಕಟ್ಟಡಗಳ ನಿರ್ಮಾಣ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಒಂದು ಕೋಟಿ ವೆಚ್ಚದಲ್ಲಿ ಪದವಿ ಪೂರ್ವ ಕಾಲೇಜಿನಲ್ಲಿ ತರಗತಿಗಳ ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು