ಶಿರಹಟ್ಟಿ: ಪಟ್ಟಣದ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಹಿನ್ನೆಲೆ ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ
ಗದಗ ತಾಲ್ಲೂಕಿನ ಶಿರಹಟ್ಟಿ ಪಟ್ಟಣದಲ್ಲಿ ಮುಸ್ಲಿಂರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ರಂಜಾನ್ ಹಬ್ಬವನ್ನು ಆಚರಿಸಿದರು. ಪಟ್ಟಣದಲ್ಲಿ ಸಮಸ್ತ ಮುಸ್ಲಿಂ ಬಾಂಧವರು ಪ್ರಮುಖ ಬೀದಿಗಳ ಮುಖಾಂತರ ಪಟ್ಟಣದ ಹರಿಪುರ ಗ್ರಾಮದ ಹೊರ ವಲಯದ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಂತರ ಪರಸ್ಪರ ಆಲಿಂಗನ ಮಾಡಿಕೊಳ್ಳುವ ಮೂಲಕ ರಂಜಾನ್ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.