ಡಿಜೆಪಿ ರಾಮಚಂದ್ರರಾವ್ ಅವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊರಟಗೆರೆ ಶಾಸಕ ಮತ್ತು ಗೃಹ ಸಚಿವ ಡಾ. ಜಿ ಪರಮೇಶ್ವರ್ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಇಂತಹ ಘಟನೆಗಳನ್ನು ತಮ್ಮ ಸರ್ಕಾರ ಸಹಿಸುವುದಿಲ್ಲ ಎಂದ ಅವರು, ರಾಮಚಂದ್ರರಾವ್ ಅವರ ಮೇಲೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಆರೋಪ ಸಾಬೀತಾದರೆ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ರಾಮಚಂದ್ರರಾವ್ ಅವರನ್ನು ಭೇಟಿ ಮಾಡಲು ಬಂದಿದ್ದರೂ, ತಾವು ಮಲಗಿದ್ದ ಕಾರಣ ಮತ್ತು ಎಚ್ಚರ ಇದ್ದರೂ ಭೇಟಿಯಾಗುತ್ತಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.